March 3, 2026
Spread the love

ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ನಡೆಸಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೋಗಳಲ್ಲಿ ಮೂವರು ಮಹಿಳಾ ಸರ್ಕಾರಿ ನೌಕರರು ಇರುವುದನ್ನು ಎಸ್‌ಐಟಿ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

ಬೆಂಗಳೂರು : ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ನಡೆಸಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೋಗಳಲ್ಲಿ ಮೂವರು ಮಹಿಳಾ ಸರ್ಕಾರಿ ನೌಕರರು ಇರುವುದನ್ನು ಎಸ್‌ಐಟಿ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಪೆನ್‌ಡ್ರೈವ್‌ನಲ್ಲಿ ಸಿಕ್ಕಿರುವ ಲೈಂಗಿಕ ದೌರ್ಜನ್ಯದ ವಿಡಿಯೋಗಳು ಹಾಗೂ ಅಶ್ಲೀಲ ಫೋಟೋಗಳ ಪರಿಶೀಲನೆ ವೇಳೆ ಮೂವರು ಮಹಿಳಾ ಸರ್ಕಾರಿ ನೌಕರರ ಗುರುತು ಪತ್ತೆಯಾಗಿದೆ. ಈ ಮೂವರು ಸಂತ್ರಸ್ತೆಯರನ್ನು ಸಂಪರ್ಕಿಸಿರುವ ಎಸ್‌ಐಟಿ ಅಧಿಕಾರಿಗಳು, ದೂರು ನೀಡುವಂತೆ ಸೂಚಿಸಿದ್ದಾರೆ. ಈ ಮೂವರು ದೂರು ನೀಡಿದಲ್ಲಿ ಪ್ರಜ್ವಲ್‌ ರೇವಣ್ಣಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.

ಈಗಾಗಲೇ ಎಸ್‌ಐಟಿ ಅಧಿಕಾರಿಗಳು ಅಶ್ಲೀಲ ವಿಡಿಯೋಗಳು ಹಾಗೂ ಪೋಟೋಗಳಲ್ಲಿರುವ ಮಹಿಳೆಯರನ್ನು ಗುರುತಿಸಿ, ದೂರು ನೀಡುವಂತೆ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಕೆಲವು ಮಹಿಳೆಯರು ಮರ್ಯಾದೆಗೆ ಅಂಜಿ ದೂರು ನೀಡಲು ಹಿಂಜರಿಯುತ್ತಿದ್ದಾರೆ ಎನ್ನಲಾಗಿದೆ. ಈ ನಡುವೆ ತಮ್ಮ ಪ್ರಯತ್ನ ನಿಲ್ಲಿಸದ ಎಸ್‌ಐಟಿ ಅಧಿಕಾರಿಗಳು, ಆ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡುವುದಾಗಿ ದೈರ್ಯ ತುಂಬುತ್ತಿದ್ದಾರೆ ಎಂದು ತಿಳಿದು ಬಂದಿದೆ.   

Leave a Reply

Your email address will not be published. Required fields are marked *