September 9, 2025
sathvikanudi - ch tech giant

ಲೋಕಾಯೋಕ್ತ ರೈಡ್ : 5 ಲಕ್ಷ ಲಂಚಕ್ಕೆ ಬೇಡಿಕೆ; ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಡೋ !?

Spread the love

ಕಾಮಗಾರಿಗೆ ಆಡಳಿತಾತ್ಮಕ ಮಂಜೂರು ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಇದರಿಂದ ನೊಂದ ವ್ಯಕ್ತಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ ಹಣ ಪಡೆಯುವ ವೇಳೆ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ರೆಡ್ ಆ್ಯಂಡ್ ಆಗಿ ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರದ (Doddaballapura) ಅರಳು ಮಲ್ಲಿಗೆ ಪಂಚಾಯಿತಿ ಪಿಡಿಒ ಲಂಚ ಸ್ವೀಕರಿಸುವಾಗ ಲೋಕಾಯುಕ್ತ (Karnataka Lokayukta) ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ರೆಸ್ಟೋರೆಂಟ್ ಜನರಲ್ ಲೈಸನ್ಸ್ ನವೀಕರಿಸಲು (License Renewal) 5 ಲಕ್ಷ ರೂಪಾಯಿಗೆ ಪಿಡಿಒ ನಿರಂಜನ್ ಬೇಡಿಕೆ ಇಟ್ಟಿದ್ದ ಆರೋಪ ಕೇಳಿ ಬಂದಿದೆ. 3.5 ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ರೆಂಡ್ ಆ್ಯಂಡ್ ಆಗಿ ಹಿಡಿದಿದ್ದಾ.

ನರಸಿಂಹಮೂರ್ತಿ ಎಂಬ ವ್ಯಕ್ತಿಯ ದೂರಿನ ಮೇರೆಗೆ ಲೋಕಾಯುಕ್ತ ಎಸ್ಪಿ ಪವನ್ ನೆಜ್ಜೂರು ನೇತೃತ್ವದಲ್ಲಿ ದಾಳಿ ಮಾಡಿ ಪಿಡಿಒನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ದೊಡ್ಡಬಳ್ಳಾಪುರ ತಾಲೂಕು ಪಂಚಾಯತಿ ಆವರಣದಲ್ಲಿ ಅಧಿಕಾರಿಯನ್ನು ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು, ಪಿಡಿಒರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಲೋಕಾಯುಕ್ತ ಎಸ್ಪಿ ಪವನ್ ನೆಜ್ಜೂರು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

WhatsApp Image 2025-06-21 at 19.57.59
Trending Now