September 9, 2025
sathvikanudi - ch tech giant

ಆಪಘಾತ ಇಬ್ಬರು ಸ್ಥಳದಲ್ಲೇ ಸಾವು..

Spread the love

ಭೀಕರ ಕಾರು ಅಪಘಾತದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಚಿತ್ತೂರು ತಾಲ್ಲೂಕಿನ ಯರಬಹಳ್ಳಿ ಬಳಿ ಸಂಭವಿಸಿದೆ.

ಮೃತರು ನಾಗರಾಜ್ ಶೆಟ್ಟಿ (55) ಮತ್ತು ವಿಶಾಲಾಕ್ಷಮ್ಮ (75) ಎಂದು ಗುರುತಿಸಲಾಗಿದೆ. ನಾಗರಾಜ್ ಶೆಟ್ಟಿ ತಮ್ಮ ಮಗಳನ್ನು ಶಾಲೆಗೆ ಬಿಟ್ಟು ಬರುತ್ತಿದ್ದಾಗ ಈ ಅಪಘಾತ ನಡೆದಿದೆ.

ಘಟನೆಯಲ್ಲಿ ಮಗಳು ಬಿಂದು, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಸಂಬಂಧಿ ಗೀತಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣವೇ ಹಿರಿಯೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಸಂಬಂಧ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025-06-21 at 19.57.59
Trending Now