September 10, 2025
sathvikanudi - ch tech giant

ಉಡುಪಿಯಲ್ಲಿ ಪ್ರಜ್ವಲ್ ರೇವಣ್ಣ ಮಾದರಿ ಪ್ರಕರಣ; ಲೈಂಗಿಕ ಕಿರುಕುಳ ಎಸಗಿ ವಿಡಿಯೋ!?

Spread the love

ಉಡುಪಿಯಲ್ಲಿ ಪ್ರಜ್ವಲ್ ರೇವಣ್ಣ ಮಾದರಿ ಪ್ರಕರಣವು ಬೃಹತ್ ಚರ್ಚೆಗೆ ಗ್ರಾಸವಾಗಿದೆ. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದೇಶಾದ್ಯಾಂತ ಭಾರೀ ಸದ್ದು ಮಾಡಿತ್ತು. ಇದೀಗ ಇದೇ ರೀತಿಯ ಮತ್ತೊಂದು ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ (25) ಎಂಬ ಆರೋಪಿ ತನ್ನ ಪ್ರಭಾವವನ್ನು ದುರುಪಯೋಗಪಡಿಸಿಕೊಂಡು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಎಸಗುತ್ತಿದ್ದ ಮತ್ತು ವಿಡಿಯೋ ಮಾಡುತ್ತಿದ್ದ.

ಶ್ರೇಯಸ್ ನಾಯ್ಕ ತನ್ನ ಪ್ರಭಾವ ಮತ್ತು ಹಸ್ತಕ್ಷೇಪಗಳನ್ನು ಬಳಸಿಕೊಂಡು ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಎಸಗುತ್ತಿದ್ದ ಎಂಬ ಆರೋಪಗಳಿದ್ದು, ಈ ಘಟನೆಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿವೆ. ಪ್ರಕರಣವು ಮೇ 18 ರಂದು ದಾಖಲಾಗಿದ್ದು, ಪೋಕ್ಸ (POCSO) ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದೆ. ಆರೋಪಿ ಶ್ರೇಯಸ್ ನಾಯ್ಕ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆ.

ಇಂತಹ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಮಹಿಳೆಯರ ಸುರಕ್ಷತೆಯ ಬಗ್ಗೆ ಹೊಸ ಪ್ರಶ್ನೆಗಳು ಉದ್ಬವಿಸಿವೆ. ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ, ದೌರ್ಜನ್ಯ ಮತ್ತು ಇತರ ಅಕ್ರಮ ಚಟುವಟಿಕೆಗಳನ್ನು ತಡೆಯಲು ನಿಷ್ಕೃಯವಾದ ಕಾನೂನು ಕ್ರಮಗಳು ಅಗತ್ಯವಿದೆ. ಸರ್ಕಾರ ಮತ್ತು ಪೊಲೀಸ್ ಇಲಾಖೆ ಈ ರೀತಿಯ ಪ್ರಕರಣಗಳನ್ನು ತಕ್ಷಣವೇ ಗಂಭೀರವಾಗಿ ತೆಗೆದುಕೊಳ್ಳಬೇಕು ಮತ್ತು ಆರೋಪಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು.

ಇಂತಹ ಪ್ರಕರಣಗಳಲ್ಲಿ ಮಹಿಳೆಯರ ಹಕ್ಕುಗಳನ್ನು ಉಳಿಸಲು, ಅವರಿಗೂ ನ್ಯಾಯ ಒದಗಿಸಲು ಸಾರ್ವಜನಿಕರನ್ನು ಜಾಗೃತಗೊಳಿಸುವುದು ಅತೀ ಮುಖ್ಯ. ಶ್ರೇಯಸ್ ನಾಯ್ಕ ಪ್ರಕರಣವು ಪ್ರಜ್ವಲ್ ರೇವಣ್ಣ ಪ್ರಕರಣದ ಪ್ರತಿಬಿಂಬವಾಗಿ ಕಾಣುತ್ತಿದ್ದು, ಇದರಿಂದ ಸಮಾಜದಲ್ಲಿ ಎಚ್ಚರಿಕೆ ಮತ್ತು ಕಾನೂನು ಕ್ರಮಗಳ ಅಗತ್ಯವಿದೆ ಎಂಬುದು ಸ್ಪಷ್ಟವಾಗಿದೆ.

ಮಹಿಳೆಯರ ಹಕ್ಕುಗಳ ರಕ್ಷಣೆಯ ಹಿತದೃಷ್ಟಿಯಿಂದ ಈ ಪ್ರಕರಣಗಳು ಕಾನೂನು ಪ್ರಕ್ರಿಯೆಗಳ ಪ್ರಕಾರ ನಿಪೂಣವಾಗಿ ನಿರ್ವಹಿಸಲ್ಪಡಬೇಕಾಗಿದೆ. ಸಮಾಜದಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಗೌರವವನ್ನು ಉತ್ತೇಜಿಸಲು, ಇಂತಹ ಪ್ರಕರಣಗಳ ಬಗ್ಗೆ ತಕ್ಷಣವೇ ಕ್ರಮ ಕೈಗೊಳ್ಳುವುದು, ಮಹಿಳಾ ಸುರಕ್ಷತೆಯನ್ನು ಪುನಃಸ್ಥಾಪಿಸಲು ಪ್ರಮುಖವಾದುದಾಗಿದೆ.

WhatsApp Image 2025-06-21 at 19.57.59
Trending Now