September 9, 2025
sathvikanudi - ch tech giant

ಪ್ರಾಥಮಿಕ ಆರೋಗ್ಯ ಕೇಂದ್ರ ಹಾರನಹಳ್ಳಿಯಲ್ಲಿ ಯಶಸ್ವಿ ರಕ್ತದಾನ ಶಿಬಿರ

Spread the love

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಶಿವಮೊಗ್ಗ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ, ಶಿವಮೊಗ್ಗ.

ಇವರುಗಳ ಸಂಯುಕ್ತ ಆಶ್ರಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಹಾರನಹಳ್ಳಿ ಮತ್ತು ಗ್ರಾಮ ಪಂಚಾಯಿತಿ ಹಾರನಹಳ್ಳಿ  ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಎಲ್ಲಾ ವಿವಿಧ ಸಂಘ ಸಂಸ್ಥೆಗಳು ಹಾಗೂ ರಕ್ತನಿಧಿ, ಮೆಗ್ಗಾನ್ ಆಸ್ಪತ್ರೆ, ಶಿವಮೊಗ್ಗ ಇವರುಗಳ ಸಹಕಾರದೊಂದಿಗೆ
                 ರಕ್ತದಾನ ಶಿಬಿರವನ್ನು ಹಾರನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜೂ 2 ಭಾನುವಾರ ಬೆಳಗ್ಗೆ  9.0ರಿಂದ  ಸಂಜೆ 4.30 ರವರಗೆ ಅತ್ಯಂತ ಯಶಸ್ವಿಯಾಗಿ ಜರುಗಿತು.



ರಕ್ತದಾನ ಶಿಬಿರದಲ್ಲಿ ಅತ್ಯಂತ ಹೆಚ್ಚು ಮಹಿಳೆಯರು ರಕ್ತದಾನ ಮಾಡಿದ್ದು ವಿಶೇಷವಾಗಿತ್ತು.
ಹೋಬಳಿ ಮಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಕ್ತ ಸಂಗ್ರಹ ವಾಗಿರುವುದು ಅತಿ ಹೆಚ್ಚು ಸಾಹಯಕಾರಿಯಾಗಿದೆ ಎಂದು ಆರೋಗ್ಯ ಅಧಿಕಾರಿಗಳು ಅಭಿಪ್ರಾಯ ಪಟ್ಟಿದ್ದಾರೆ
ರಕ್ತದಾನ ಶಿಬಿರದಲ್ಲಿ .ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಡಾ.ನಟರಾಜ್. ಮತ್ತು

ಪ್ರಾಥಮಿಕ ಆರೋಗ್ಯಕೇಂದ್ರದ ವೈದ್ಯಧಿಕಾರಿಗಳಾದ ಡಾ.ಸತೀಶ್. ಶಿವಮೊಗ್ಗ ಮೆಗ್ಗಾನ್ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು.ಹಾರನಹಳ್ಳಿ ಪ್ರಾಥಮಿಕ  ಆರೋಗ್ಯಕೇಂದ್ರದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು

ರಕ್ತದಾನ ಮಾಡಿದವರಿಗೆ ಜಿಲ್ಲಾ ಮೆಗ್ಗಾನ ಬೋದನ ಆಸ್ಪತ್ರೆಯಿಂದ ಪ್ರಮಾಣ ಪತ್ರ ನೀಡಿ ಗೌರವಿಸಿದೆ.

WhatsApp Image 2025-06-21 at 19.57.59
Trending Now