
ಗುಬ್ಬಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಪರಿಸರ ದಿನದ ನಿಮಿತ್ತ ವಿಶೇಷ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಸಮಾರಂಭದಲ್ಲಿ ಗೌರವನ್ವಿತಾ ಗುಬ್ಬಿ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಶ್ರೀಮತಿ ವಿನುತಾ ರವರು ಮುಖ್ಯ ಅತಿಥಿಯಾಗಿ ಆಗಮಿಸಿದರು.

ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಗಾಗಿ ಮಹತ್ವದ ಸಂದೇಶವನ್ನು ನೀಡಿದರು. ಶ್ರೀಮತಿ ಪವಿತ್ರ ರವರು, ಪರಿಸರವನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಭೋಧಿಸಿದರು

ಗಡಿ ಮೀರಿದ ಪ್ರಮಾಣದಲ್ಲಿ ವನಚ್ಛೇದನ, ಮಳಿಯಿಳಿಯದ, ಆಮ್ಲಜನಕದ ಕೊರತೆ ಮತ್ತು ಬಿಸಿಲಿನ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ, ಈ ದಿನದ ಪ್ರಾಮುಖ್ಯತೆಯನ್ನು ಅವರು ವಿವರಿಸಿದರು.
ಈ ಕಾರ್ಯಕ್ರಮದಲ್ಲಿ ಗುಬ್ಬಿ ವಲಯ ಅರಣ್ಯಧಿಕಾರಿಗಳಾದ ಶ್ರೀ ಸತೀಶ್ ಚಂದ್ರ ರವರು ಮತ್ತು ಅವರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಅವರು ತಮ್ಮ ಭಾಷಣದಲ್ಲಿ, “ಪರಿಸರ ಸಂರಕ್ಷಣೆಯು ಕೇವಲ ಸರ್ಕಾರದ ಕೆಲಸವಲ್ಲ, ಅದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ” ಎಂದು ಹೇಳಿದರು.

ವಿದ್ಯಾರ್ಥಿಗಳು, ಶಿಕ್ಷಕರು, ಮತ್ತು ಸ್ಥಳೀಯರು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಸಮಯದಲ್ಲಿ ಹಲವಾರು ಬಗೆಯ ಸಸಿಗಳನ್ನು ನೆಡುವ ಮೂಲಕ ಪರಿಸರದ ಸಮತೋಲನವನ್ನು ಕಾಪಾಡುವ ಪ್ರಯತ್ನ ಮಾಡಲಾಯಿತು.
ಈ ಕಾರ್ಯಕ್ರಮವು ಜನರಲ್ಲಿನ ಪರಿಸರ ಜಾಗೃತಿಯನ್ನು ಹೆಚ್ಚಿಸುವಲ್ಲಿ ಮಹತ್ವದ ಪಾತ್ರವಹಿಸಿತು. ಪರಿಸರ ಸ್ನೇಹಿ ಚಟುವಟಿಕೆಗಳಲ್ಲಿ ಎಲ್ಲರೂ ತೊಡಗಿಕೊಳ್ಳಬೇಕು ಎಂಬ ಸಂಕಲ್ಪವನ್ನು ದೃಢ ಮಾಡಲಾಯಿತು.