
ಮೈಸೂರು :
ಸರಗೂರು: ಸರಗೂರು ಪಟ್ಟಣದ ಹಮೀರ್ ಸುಹೇಲ್ ಅವರನ್ನು ಸರಗೂರು ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಅಬ್ದುಲ್ ಜಬ್ಬಾರ್ ಹಾಗೂ ಶಾಸಕರಾದ ಅನಿಲ್ ಚಿಕ್ಕಮಾದು ಅವರ ಸೂಚನೆ ಮೇರೆಗೆ ಮತ್ತು ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಮೊಹಿಸೀನ್ ಖಾನ್ ಅವರ ಆದೇಶದಂತೆ ಹಮೀರ್ ಸುಹೇಲ್ ಅವರನ್ನು ಈ ಹೊಣೆಗಾರಿಕೆಗೆ ನೇಮಕ ಮಾಡಲಾಗಿದೆ.
ಈ ನೇಮಕಾತಿ ಪಕ್ಷದ ಸಂಘಟನಾತ್ಮಕ ದೃಷ್ಟಿಯಿಂದ ಮಹತ್ವದ್ದಾಗಿದ್ದು, ಹಮೀರ್ ಸುಹೇಲ್ ಅವರು ಸಮುದಾಯದ ಒಳಿತಿಗಾಗಿ ತಮ್ಮ ಹೊಸ ಹೊಣೆಗಾರಿಯನ್ನು ಸಮರ್ಥವಾಗಿ ನಿರ್ವಹಿಸುವಂತೆ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.