
ತೀರ್ಥಹಳ್ಳಿ ತಾಲೂಕು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಗದ್ದೆ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಿನ್ನೆ ನಡೆದಿದೆ.
ಬಿದರಗೋಡು ಗ್ರಾಮ ಪಂಚಾಯಿತಿಯ ಮುತ್ತೋಳ್ಳಿ ವಾಸಿ ನಾಗೇಂದ್ರ (40) ಅವರು ತೀರ್ಥಹಳ್ಳಿ ತಾಲೂಕು ಬಾಳೆಹಳ್ಳಿ ಗ್ರಾಮದ ಗುಜುಗೊಳ್ಳಿ ಕೇಶವ ಕಿಣಿ ಬಿನ್ ವಿಠಲ್ ಕಿಣಿ ಇವರ ಹೊಸಗದ್ದೆ ಗ್ರಾಮದ ಸರ್ವೆ ನಂಬರ್ 186/2 ಅಡಿಕೆ ತೋಟದಲ್ಲಿ ಕಳೆ ತೆಗೆಯುವ ಸಂದರ್ಭದಲ್ಲಿ ಸಿಡಿಲು ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ನಿನ್ನೆ ಸಂಜೆ 4:00 ಗಂಟೆಗೆ ನಡೆದಿದೆ. ಸ್ಥಳೀಯರು ತಕ್ಷಣವೇ ರಕ್ಷಣೆ ಕಾರ್ಯಕ್ಕೆ ಮುಂದಾಗಿದ್ದು, ನಾಗೇಂದ್ರ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ, ಆಗಲೇ ಅವರು ಮೃತಪಟ್ಟಿರುವುದನ್ನು ವೈದ್ಯರು ದೃಢಪಡಿಸಿದರ ಪೊಲೀಸ್ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿದರು. ಆಘಾತಕಾರಿ ಘಟನೆಗೆ ಸಂಬಂಧಿಸಿದಂತೆ ಅಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ನಾಗೇಂದ್ರ ಅವರ ಸಾವಿನಿಂದ ಕುಟುಂಬವನ್ನೆಲ್ಲಾ ಆಘಾತಕ್ಕೊಳಗಾಗಿದ್ದು, ಸ್ಥಳೀಯರು ಮತ್ತು ಕುಟುಂಬಸ್ಥರು ದುಃಖ ವ್ಯಕ್ತಪಡಿಸಿದ್ದಾರೆ. ಈ ಘಟನೆ ಎಲ್ಲರಿಗೂ ಹೆಚ್ಚಿನ ಜಾಗ್ರತೆ ವಹಿಸುವ ಅಗತ್ಯವನ್ನು ನೆನಪಿಸಿಸಿದೆ.