December 6, 2025
Breaking News

ಉಡುಪಿManipal: ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಸಂಗ್ರಹಿಸಿದ್ದ ಗಾಂಜಾ ಸಹಿತ ಆರೋಪಿ ಬಂಧನ…

Spread the love

ಉಡುಪಿ: ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿಟ್ಟಿದ್ದ ಗಾಂಜಾ ಸಹಿತ ವ್ಯಕ್ತಿಯೊಬ್ಬನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಹೆರ್ಗಾ ಗ್ರಾಮದ ಅಪಾರ್ಟ್ಮೆಂಟ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ತಿರುವನಂತಪುರ ಮೂಲದ ಸಿದ್ಧಾರ್ಥ್‌ (22) ಎಂಬಾತನನ್ನು ಬಂಧಿಸಲಾಗಿದೆ.

ಜೂನ್ 5ರಂದು ಸಂಜೆ 5 ಗಂಟೆಗೆ ಮಣಿಪಾಲ ಠಾಣಾ ಪೊಲೀಸ್‌ ನಿರೀಕ್ಷಕ ದೇವರಾಜ್‌ ಟಿ.ವಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಆರೋಪಿಯಿಂದ 20,000 ರೂ ಮೌಲ್ಯದ ಸುಮಾರು 388 ಗ್ರಾಂ ಗಾಂಜಾ ಹಾಗೂ 45,000 ರೂ ಮೌಲ್ಯದ ಮೊಬೈಲ್‌ ಫೋನ್‌ ಜಪ್ತಿ ಮಾಡಲಾಗಿದೆ.

ಈ ಗಾಂಜಾವನ್ನು ಮಣಿಪಾಲದಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡಿ ಲಾಭಗಳಿಸುವ ಉದ್ದೇಶದಿಂದ ಈತ ಶೇಖರಿಸಿ ಇಟ್ಟಿದ್ದಾನೆ ಎಂದು ತನಿಖೆ ವೇಳೆ ಸಿದ್ಧಾರ್ಥ್‌ ಬಾಯ್ಬಿಟ್ಟಿದ್ದಾನೆ.

WhatsApp Image 2025-06-21 at 19.57.59