
ಗುಬ್ಬಿ ತಾಲೂಕಿನ ಅರಿವೇಸಂದ್ರ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅರ್ಧದ್ವಾರಿ ಮುಗಿದಿದ್ದು, ಕಳೆದ ಎರಡು ವರ್ಷಗಳಿಂದ ಕುಂಟುತ್ತಲೇ ಮುಂದುವರಿಯುತ್ತಿದೆ. ಈ ಘಟನೆಯಿಂದ ಸ್ಥಳೀಯ ವಾಹನ ಸವಾರರು ತೀವ್ರ ಅಸಮಾಧಾನಗೊಂಡಿದ್ದಾರೆ. ಮಳೆಯಾದಾಗ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿ, ರಸ್ತೆಯಲ್ಲಿ ದೊಡ್ಡ ಪ್ರಮಾಣದ ಕಸುರು ಮತ್ತು ಸೊಪ್ಪು ತುಂಬಿ, ವಾಹನಗಳನ್ನು ಸಾಗಿಸಲು ಬಹಳ ಕಷ್ಟವಾಗುತ್ತಿದೆ.
ಅರ್ಧದಾರಿಯಲ್ಲಿಯೇ ನಿಂತಿರುವ ಈ ಕಾಮಗಾರಿ ಪೂರ್ಣ ಆಗದೇ ಇರುವುದರಿಂದ, ವಾಹನ ಸವಾರರು ಮತ್ತು ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಮಳೆ ಬಂದಾಗ ರಸ್ತೆಯ ಮೇಲೆ ಕಲ್ಲು, ಮಣ್ಣು ತುಂಬಿಕೊಂಡು ವಾಹನಗಳು ಪಕ್ಕಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ, ವಾಹನ ಸವಾರರು ಹೋಗಲು ಸಹಾಯಕ್ಕಾಗಿ ಪರದಾಡುವಂತಾಗಿದೆ.
ಎನ್‌ಎಚ್ ಹೈವೇ ಅಧಿಕಾರಿಗಳು ಈ ಸಮಸ್ಯೆ ಪರಿಹರಿಸಲು ತಕ್ಷಣದ ಕ್ರಮ ಕೈಗೊಳ್ಳಬೇಕೆಂದು ವಾಹನ ಸವಾರರು ಮತ್ತು ಸ್ಥಳೀಯ ನಿವಾಸಿಗಳು ಒತ್ತಾಯಿಸುತ್ತಿದ್ದಾರೆ. ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಿ, ಸಮರ್ಪಕವಾದ ರಸ್ತೆ ಸೌಲಭ್ಯವನ್ನು ಒದಗಿಸಬೇಕು ಎಂಬುದು ಸಾರ್ವಜನಿಕರ ಬೇಡಿಕೆ.