
ತುಮಕೂರಿನ ಜಿಲ್ಲಾಸ್ಪತ್ರೆಗೆ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಶುಕ್ರವಾರ ಭೇಟಿ ನೀಡಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮಸ್ಥರ ಆರೋಗ್ಯ ವಿಚಾರಿಸಿದರು. ಕಲುಷಿತ ನೀರು ಸೇವನೆಯಿಂದಾಗಿ ಗ್ರಾಮಸ್ಥರ ಆರೋಗ್ಯದಲ್ಲಿ ಉಂಟಾದ ಸಮಸ್ಯೆಗಳ ಬಗ್ಗೆ ಅವರು ಆರೋಗ್ಯಾಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ, ಶಾಸಕರಾದ ಸುರೇಶ್‌ಗೌಡ, ಜ್ಯೋತಿಗಣೇಶ್, ಚಿದಾನಂದಗೌಡ, ಸ್ಫೂರ್ತಿ ಚಿದಾನಂದ್, ವೀರಭದ್ರಯ್ಯ, ಡಿಹೆಚ್‌ಓ ಡಾ. ಮಂಜುನಾಥ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಆಸ್ಕರ್ ಬೇಗ್ ಹಾಗೂ ಇತರ ಸ್ಥಳೀಯ ನಾಯಕರು ಉಪಸ್ಥಿತರಿದ್ದರು.
ಸಚಿವ ವಿ. ಸೋಮಣ್ಣ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸಮಗ್ರ ಆರೋಗ್ಯ ಪರೀಕ್ಷೆ ನಡೆಸುವಂತೆ ಮತ್ತು ಅಗತ್ಯ ಚಿಕಿತ್ಸೆ ನೀಡಿ, ಮುಂದಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಕಲುಷಿತ ನೀರಿನ ಸಮಸ್ಯೆಯನ್ನು ನಿವಾರಿಸಲು ಮತ್ತು ಪಾರಂಪರಿಕ ನೀರಿನ ಮೂಲಗಳನ್ನು ಸುಧಾರಿಸಲು ತಕ್ಷಣ ಕ್ರಮ ಕೈಗೊಳ್ಳಲು ಸೂಚಿಸಿದರು.
ಇಂತಹ ಘಟನೆಗಳು ಪುನರಾವೃತ್ತಿಯಾಗದಂತೆ ತಕ್ಷಣವೇ ಶುದ್ಧ ನೀರಿನ ಸರಬರಾಜು ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಸಾರ್ವಜನಿಕ ಆರೋಗ್ಯವನ್ನು ಕಾಪಾಡಲು ವಿಶೇಷ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ತಿಳಿಸಿದರು. ✍️✍️✍️