September 9, 2025
sathvikanudi - ch tech giant

ಮೂಲ ಸೌಕರ್ಯಗಳಿಂದ ದೂರ ಉಳಿದ ಸರ್ಕಾರಿ ಶಾಲೆಗಳು: ಶಿಕ್ಷಕರ ಕೊರತೆ…..

Spread the love

ತಿಪಟೂರು

ತಾಲ್ಲೂಕಿನ ಹುಚ್ಚಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಚ್ಚನಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ 1990ರಲ್ಲಿ ಪ್ರಾರಂಭವಾಗಿದೆ. ಇಲ್ಲಿ ಒಂದರಿಂದ ಏಳನೇ ತರಗತಿಯವರೆಗೆ ಒಟ್ಟು 118 ವಿದ್ಯಾರ್ಥಿಗಳು ದಾಖಲಾಗಿದ್ದಾರೆ.



ಶಾಲೆಯ ಮುಖ್ಯ ಶಿಕ್ಷಕಿ ಶೈಲಜಾ ಅವರ ಮಾತುಗಳ ಪ್ರಕಾರ, ಶಾಲೆಗೆ ಅನುಕೂಲಕರ ಮೂಲ ಸೌಕರ್ಯಗಳಿಲ್ಲದೆ ಪಾಠ ಹೇಳುವುದರಲ್ಲಿ ಅನೇಕ ತೊಂದರೆಗಳು ಎದುರಾಗುತ್ತಿವೆ.

ಅವುಗಳಲ್ಲಿ ವಿದ್ಯಾರ್ಥಿಗಳ ಆಸನ, ಭದ್ರ ಕಟ್ಟಡ, ಶುದ್ಧ ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯಗಳಿಲ್ಲದೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಸವಾಲಿನ ಸಂಗತಿಯಾಗಿ ಪರಿಣಮಿಸಿದೆ.

ಪಂಚಾಯತಿ ಆಡಳಿತಾಧಿಕಾರಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ಈ ಸಮಸ್ಯೆಯನ್ನು ತಂದರೂ, ಇನ್ನೂ ಯಾವುದೇ ಪ್ರಗತಿಯಾಗಿಲ್ಲ.

ಈ ಹಿನ್ನೆಲೆಯಲ್ಲಿ, ಎರಡು ತರಗತಿಗಳನ್ನು ಒಂದೆಡೆ ಸೇರಿಸಿ ಪಾಠಗಳನ್ನು ನಡೆಸಲಾಗುತ್ತಿದೆ. ಇದು ವಿದ್ಯಾರ್ಥಿಗಳ ಕಲಿಕೆಯ ಗುಣಮಟ್ಟವನ್ನು ಕಡಿಮೆ ಮಾಡುತ್ತಿದ್ದು, ಮಕ್ಕಳನ್ನು ಇನ್ನಷ್ಟು ಬೇಸರಕ್ಕೆ ದೂಡುತ್ತಿದೆ.

ಹುಚ್ಚನಹಟ್ಟಿಯ ಶಾಲೆಯು ಮೂಲಭೂತ ಸೌಕರ್ಯಗಳ ಕೊರತೆಯಿಂದ ಬಳಲುತ್ತಿದ್ದು, ಸ್ಥಳೀಯ ಆಡಳಿತ ಮತ್ತು ಸಂಬಂಧಿತ ಅಧಿಕಾರಿಗಳು ತ್ವರಿತವಾಗಿ ಕ್ರಮ ತೆಗೆದುಕೊಂಡು ಶಾಲೆಗೆ ಅಗತ್ಯವಿರುವ ಸೌಕರ್ಯಗಳನ್ನು ಒದಗಿಸಬೇಕು.

ಈ ಮೂಲಕ ಮಕ್ಕಳು ಸುರಕ್ಷಿತ ವಾತಾವರಣದಲ್ಲಿ, ಉತ್ತಮ ಸೌಲಭ್ಯಗಳೊಂದಿಗೆ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ.

WhatsApp Image 2025-06-21 at 19.57.59
Trending Now