September 9, 2025
sathvikanudi - ch tech giant

ತೆಲಂಗಾಣದಲ್ಲಿ ಮಹಿಳಾ ಕಾನ್‌ಸ್ಟೆಬಲ್ ಮೇಲೆ ಅತ್ಯಾಚಾರ: ಇಬ್ಬರು ಪೊಲೀಸರು ಬಂಧಿತರು.!?

Spread the love


ತೆಲಂಗಾಣ ರಾಜ್ಯದ ಭೂಪಾಲಪಲ್ಲಿ ಜಿಲ್ಲೆಯಲ್ಲಿ ಜನತೆಯನ್ನ ರಕ್ಷಣೆ ಮಾಡುವ ಪೊಲೀಸರೇ  ಮಹಿಳಾ ಕಾನ್‌ಸ್ಟೆಬಲ್ ಮೇಲೆ ಇಬ್ಬರು ಪೊಲೀಸರು ಅತ್ಯಾಚಾರ ಎಸಗಿದ ದಾರುಣ ಘಟನೆ ಸಂಭವಿಸಿದೆ. ಕಾಳೇಶ್ವರಂ ಪೊಲೀಸ್‌ ಸಬ್ ಇನ್ಸ್‌ಪೆಕ್ಟ‌ರ್ ಭವಾನಿ ಸೇನ್ ಮತ್ತು ಜಯಶಂಕರ್ ಎಂಬ ಇಬ್ಬರು ಆರೋಪಿಗಳಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿಗಳನ್ನು ಬಂಧಿಸಿ, ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ರಿಮಾಂಡ್ ಮಾಡಿದ್ದಾರೆ.

ಈ ಅತ್ಯಾಚಾರ ಪ್ರಕರಣವು ತೀವ್ರ ಆಕ್ರೋಶ ಹುಟ್ಟಿಸಿದೆ. ಆರೋಪಿಗಳಾದ ಪೊಲೀಸರು, ಕಾನೂನು ಮತ್ತು ಶಿಸ್ತಿನ ನಿಯಮಗಳನ್ನು ತೊರೆದು, ಗನ್ ತೋರಿಸಿ ಮಹಿಳಾ ಕಾನ್‌ಸ್ಟೆಬಲ್ ಮೇಲೆ ಅತ್ಯಾಚಾರ ಎಸಗಿದ ಘಟನೆ ನಿಜಕ್ಕೂ ದುರಂತವಾಗಿದೆ. ಈ ದುಷ್ಕೃತ್ಯಕ್ಕೆ ಒಳಗಾದ ಇಬ್ಬರು ಪೊಲೀಸರನ್ನು ತಕ್ಷಣ ಸೇವೆಯಿಂದ ವಜಾ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ ಮತ್ತು ಮಹಿಳಾ ಕಾನ್‌ಸ್ಟೆಬಲ್‌ರಿಗೆ ನ್ಯಾಯ ದೊರಕಿಸಲು ಪೊಲೀಸರು ಬದ್ಧರಾಗಿದ್ದಾರೆ. ಇಂತಹ ಘಟನೆಗಳು ಪುನರಾವರ್ತಿಸದಂತೆ ತಡೆಯಲು ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮತ್ತು ಪೊಲೀಸ್ ಇಲಾಖೆ ನಿರ್ಧರಿಸಿದೆ. ಈ ಪ್ರಕರಣವು ಮಹಿಳಾ ಸುರಕ್ಷತೆ ಮತ್ತು ಕಾನೂನು ನಿಯಮ ಪಾಲನೆಯ ಕುರಿತು ಚರ್ಚೆಗೆ ಕಾರಣವಾಗಿದ್ದು, ಸಾರ್ವಜನಿಕರ ಆಕ್ರೋಶವನ್ನು ವ್ಯಕ್ತಪಡಿಸಿದೆ.

ಮಹಿಳೆಯರ ಸುರಕ್ಷತೆ ಮತ್ತು ಗೌರವ ಕಾಪಾಡಲು ಇಂತಹ ಪ್ರಕರಣಗಳಲ್ಲಿ ತಕ್ಷಣ ಕಾರ್ಯಪ್ರವೃತ್ತರಾಗಿ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಪೊಲೀಸರು ತುದಿಗಾಲಲ್ಲಿ ನಿಂತಿದ್ದಾರೆ.

WhatsApp Image 2025-06-21 at 19.57.59
Trending Now