September 10, 2025
sathvikanudi - ch tech giant

ಯಾದಗಿರಿMurder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!?

Spread the love

ಯಾದಗಿರಿ: ಅನ್ಯಕೋಮಿನ ಯುವಕರಿಂದ ದಲಿತ ಹಿಂದು ಯುವಕನ‌ (Murder Case ) ಹತ್ಯೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಯಾದಗಿರಿ ನಗರದ ಶಹಾಪೂರ ಪೇಟ್ ಬಡಾವಣೆಯಲ್ಲಿ ಘಟನೆ ನಡೆದಿದೆ. ರಾಕೇಶ್ (22) ಮೃತ ದುರ್ದೈವಿ.

ಭಾನುವಾರ ರಾತ್ರಿ ರಾಕೇಶ್‌ ಊಟ ಮಾಡಲು ಹೊರಗೆ ಬಂದಿದ್ದ. ಅನ್ಯಕೋಮಿನವರ ಮನೆಯಲ್ಲಿ ರೊಟ್ಟಿ ಮಾರಾಟ ಮಾಡುತ್ತಿದ್ದರು. ಹೀಗಾಗಿ ಮನೆ ಸಮೀಪದಲ್ಲೇ ಇರುವ ರೊಟ್ಟಿ ಕೇಂದ್ರಕ್ಕೆ ರಾಕೇಶ್‌ ತೆರಳಿದ್ದ. ಈ ವೇಳೆ ಮನೆ ಬಾಗಿಲು ಬಡಿದು ರೊಟ್ಟಿ ಕೇಳಿದ್ದ, ಆದರೆ ರೊಟ್ಟಿ ಇಲ್ಲವೆಂದು ಕಳುಹಿಸಿದ್ದರು. ಮನೆಗೆ ವಾಪಸ್ ಬಂದ ರಾಕೇಶ್‌ ಖಾಲಿ ಹೊಟ್ಟೆಯಲ್ಲಿ ನಿದ್ರೆಗೆ ಜಾರಿದ್ದ.ಸ್ವಲ್ಪ ಸಮಯದ ನಂತರ ರಾಕೇಶ್‌ ಮನೆಗೆ ಬಂದಿದ್ದ ಅನ್ಯಕೋಮಿನ ಯುವಕರು, ರೊಟ್ಟಿ ಕೇಳಲು ಮನೆಗೆ ಯಾಕೆ ಬಂದ್ರಿ ಎಂದು ಪ್ರಶ್ನೆ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ಪ್ರಮುಖ ಆರೋಪಿ ಫೈಯಾಜ್ ಸೇರಿ ನಾಲ್ವರು ರಾಕೇಶ್‌ನ ಗುಪ್ತಾಂಗಕ್ಕೆ ಹಲ್ಲೆ ಮಾಡಿದ್ದಾರೆ. ಮಾರಣಾಂತಿಕ ಹಲ್ಲೆಗೊಳಗಾದ ರಾಕೇಶ್‌ ಉಸಿರುಚೆಲ್ಲಿದ್ದಾನೆ ಎಂದು ರಾಕೇಶ್ ತಾಯಿ ಆರೋಪಿಸಿದ್ದಾರೆ.

ಇನ್ನೂ ಹಿಂದೂ ಯುವಕನ‌ ಹತ್ಯೆ ಮರೆಮಾಚಲು ಪೊಲೀಸ್ ಇಲಾಖೆ ಯತ್ನಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಭಾನುವಾರ ತಡರಾತ್ರಿ ಕೊಲೆ ನಡೆದಿದ್ದು, ಕೇಸ್ ದಾಖಲಿಸಿಕೊಂಡಿಲ್ಲ ಎನ್ನಲಾಗಿದೆ. ದಲಿತ ಕುಟುಂಬಕ್ಕೆ ಬಿಜೆಪಿ, ಹಿಂದೂ‌ ಕಾರ್ಯಕರ್ತರು ಬೆಂಗಾವಲಾಗಿ ನಿಂತ ಕೂಡಲೇ ಎಚ್ಚೆತ್ತ ಪೊಲೀಸರು, ಕೊಲೆ ನಡೆದ 18 ಗಂಟೆಗಳ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಖುದ್ದು ಎಸ್‌ಪಿ ಜಿ.ಸಂಗೀತಾ ಅವರು ಸ್ಥಳದಲ್ಲಿ ನಿಂತು ಆಸ್ಪತ್ರೆಗೆ ರವಾನಿಸಿದ್ದಾರೆ.ಪ್ರಕರಣ ಸಂಬಂಧ ಯಾದಗಿರಿ ಎಸ್‌ಪಿ ಜಿ.ಸಂಗೀತಾ ಪ್ರತಿಕ್ರಿಯಿಸಿದ್ದು, ನಮಗೆ ಕೊಲೆ ನಡೆದಿರುವ ಬಗ್ಗೆ ಗೊತ್ತೇ ಇಲ್ಲ. ಕೊಲೆಯಾದ ಯುವಕನ ಕುಟುಂಬಸ್ಥರು ಇನ್ನೂ ಏನು ಹೇಳಿಲ್ಲ. ದೂರು ಕೊಡಿ ಎಂದರೆ ಅವರು ಬಂದಿಲ್ಲ. ಪ್ರಕರಣ ಸಂಬಂಧ ಮಾಹಿತಿ ಕೇಳಿದರೆ, ರೊಟ್ಟಿ ಕೇಂದ್ರಕ್ಕೆ ಹೋಗಿದ್ದ ಎನ್ನುತ್ತಿದ್ದಾರೆ. ಅವರ ಹಿರಿಯರ ಜತೆ ಚರ್ಚಿಸಿ ನಂತರ ಬಂದು ದೂರು ಕೊಡುತ್ತಾರೆ. ದೂರು ಕೊಟ್ಟ ನಂತರ ವಿಚಾರಣೆ ಮಾಡಿ ಆರೋಪಿಯನ್ನು ಬಂಧಿಸುತ್ತೇವೆ ಎಂದಿದ್ದಾರೆ.

ಯಾದಗಿರಿ ನಗರದಲ್ಲಿ ದಲಿತ ಹಿಂದೂ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ನಡೆಗೆ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ‌ಗರಂ ಆಗಿದ್ದರು. ಯುವಕನ ಕೊಲೆಯಾದರು ಪೊಲೀಸರಿಗೆ ಕೇರ್ ಇಲ್ಲ, ಬದಲಿಗೆ ರಾಜಿ ಮಾಡಿಸಲು ಮುಂದಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಕೊಲೆ ಕೇಸ್ ದಾಖಲು ಮಾಡದಿದ್ದರೆ, ಗಾಂಧಿ ವೃತ್ತದಲ್ಲಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು

WhatsApp Image 2025-06-21 at 19.57.59
Trending Now