October 27, 2025
sathvikanudi - ch tech giant

ಕೋರಮಂಗಲದಲ್ಲಿ ಲೇಡಿಸ್‌ ಪಿಜಿಗೆ ನುಗ್ಗಿ ಯುವತಿಯ ಕೊಲೆ..!?

Spread the love

ಬೆಂಗಳೂರಿನ :

ಕೋರಮಂಗಲದಲ್ಲಿ ಲೇಡಿಸ್‌ ಪಿಜಿಗೆ ನುಗ್ಗಿ ಯುವತಿಯ ಕೊಲೆ ಮಾಡಿರುವ ಘಟನೆ ನಡೆದಿದೆ. ಮೃತ ಯುವತಿಯನ್ನು ಬಿಹಾರ ಮೂಲದ ಕೃತಿ ಕುಮಾರಿ ಎಂದು ಗುರುತಿಸಲಾಗಿದೆ. ವಿಆರ್ ಲೇಔಟ್‌ನ ಪಿಜಿಯೊಂದರಲ್ಲಿ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಚಾಕುವಿನಿಂದ ಕತ್ತು ಸೀಳಿ ಕೊಲೆ ಮಾಡಲಾಗಿದ್ದು, ಪರಿಚಯಸ್ಥ ಯುವಕನಿಂದಲೇ ಕೊಲೆಯಾಗಿದೆ ಎಂದು ಶಂಕಿಸಲಾಗಿದೆ. ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಈ ಘಟನೆ ಪೊಲೀಸರು ಮತ್ತು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಪಿಜಿಯಲ್ಲಿರುವ ಇತರ ಯುವತಿಯರಲ್ಲಿ ಭಯದ ವಾತಾವರಣ ಉಂಟಾಗಿದೆ. ಪೊಲೀಸರು ಅಪರಾಧ ಸ್ಥಳದಲ್ಲಿ ಪರಿಶೀಲನೆ ನಡೆಸಿ ಸಾಕ್ಷಿಗಳನ್ನು ಸಂಗ್ರಹಿಸಿದ್ದಾರೆ. ಕೊಲೆಯ ಶಂಕಿತನನ್ನು ಪತ್ತೆಹಚ್ಚಲು ಕ್ರಮ ಕೈಗೊಳ್ಳಲಾಗುವುದು.

ಪೊಲೀಸರು ಶೀಘ್ರ ಕ್ರಮ ಕೈಗೊಂಡು ಆರೋಪಿ ಯುವಕನನ್ನು ಬಂಧಿಸಲು ಮುಂದಾಗಿದ್ದಾರೆ. ಕೃತಿ ಕುಮಾರಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಘಟನೆ ಬೆಂಗಳೂರಿನಲ್ಲಿ ಪಿಜಿಯ ಸುರಕ್ಷತೆಗೆ ಸಂಬಂಧಿಸಿದ ಪ್ರಶ್ನೆಗಳನ್ನು ಮತ್ತೆ ಹೊರತೆಗೆದು ಕೇಳಿಸಿದೆ.

WhatsApp Image 2025-06-21 at 19.57.59
Trending Now