September 9, 2025
sathvikanudi - ch tech giant

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 10 ಅನಕೊಂಡ ಹಾವುಗಳು ಜಪ್ತಿ

Spread the love

ಬೆಂಗಳೂರು: ವಿದೇಶದಿಂದ ಅಕ್ರಮವಾಗಿ 10 ಹಳದಿ ಬಣ್ಣದ ಅನಕೊಂಡ ಹಾವುಗಳನ್ನು ಸಾಗಾಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಬಂಧಿಸಿದ್ದಾರೆ.ಬ್ಯಾಂಕಾಕ್ ನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರ ಲಗೇಜ್ ಗಳನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಪ್ರಯಾಣಿಕನೊಬ್ಬನ ಲಗೇಜ್ ತಪಾಸಣೆ ಮಾಡುವಾಗ 10 ಹಳದಿ ಅನಕೊಂಡ ಪತ್ತೆಯಾಗಿವೆ.ಕೂಡಲೇ ಅಧಿಕಾರಿಗಳು ಪ್ರಯಾಣಿಕನನ್ನ ವಶಕ್ಕೆ ಪಡೆದಿದ್ದು, ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ಹಳದಿ ಬಣ್ಣ ಆನಕೊಂಡ ಹಾವುಗಳನ್ನು ರಕ್ಷಿಸಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಶಕ್ಕೆ ನೀಡಿದ್ದಾರೆ.

WhatsApp Image 2025-06-21 at 19.57.59
Trending Now