
ಚಳ್ಳಕೆರೆ :
ತಾಲೂಕಿನ ರಾಮಜೋಗಿಹಳ್ಳಿ ಗ್ರಾಮದಲ್ಲಿ ಇಂದು ಶ್ರೀ ದುರ್ಗಾಂಬಿಕಾ ದೇವಿ ಜಾತ್ರಾ ಮಹೋತ್ಸವವು ಅದ್ದೂರಿಯಾಗಿ ನಡೆಯಿತು. ಸಡಗರ, ಸಂಭ್ರಮ ಹಾಗೂ ಭಕ್ತಿಯ ಮೆರಗು ನೀಡಿದ ಈ ಜಾತ್ರೆಯಲ್ಲಿ ಗ್ರಾಮಸ್ಥರು ಹಾಗೂ ವಿವಿಧ ಭಾಗಗಳಿಂದ ಆಗಮಿಸಿದ ಭಕ್ತರು ಪಾಲ್ಗೊಂಡು ಜಾತ್ರೆಯನ್ನು ಯಶಸ್ವಿಯಾಗಿ ನಡೆಸಿದರು.
ಈ ಸಂದರ್ಭದಲ್ಲಿ ಚಳ್ಳಕೆರೆ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ. ರಘುಮೂರ್ತಿ ಶ್ರೀ ದುರ್ಗಾಂಬಿಕಾ ದೇವಿಯ ದರ್ಶನ ಪಡೆದು, ಜಾತ್ರಾ ಮಹೋತ್ಸವದ ಯಶಸ್ಸಿಗೆ ಶುಭ ಹಾರೈಸಿದರು. ಅವರ ಜೊತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಮತ್ತು ಮುಖಂಡರುಗಳಾದ ಸುರೇಶ್ ಬಾಬು, ನಾಗರಾಜ್, ಸುರೇಶ್, ಉಮಾಕಾಂತ್ ರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಭಕ್ತರು ಹಾಗೂ ಸ್ಥಳೀಯರು ಶಾಸಕರ ಭೇಟಿಗೆ ಸಂತಸ ವ್ಯಕ್ತಪಡಿಸಿದ್ದು, ಈ ಜಾತ್ರಾ ಮಹೋತ್ಸವವು ಗ್ರಾಮದಲ್ಲಿನ ಶ್ರದ್ಧಾ ಮತ್ತು ಭಕ್ತಿಗೆ ಹೊಸ ಮೆರಗು ತಂದಿತು.
