September 10, 2025
sathvikanudi - ch tech giant

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಮಕ್ಕಳಗೆ ಸ್ವಯಂ ರಕ್ಷಣೆ ಜಾಗೃತಿ ಕಾರ್ಯಕ್ರಮ..!?

Spread the love



ಚನ್ನರಾಯಪಟ್ಟಣ:

ಪೊಲೀಸ್ ಠಾಣಾ ವ್ಯಾಪ್ತಿಯ ಬಾಲೇಪುರ ಗ್ರಾಮದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕೇಂದ್ರ ಪುರಸ್ಕೃತ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ 10ನೇ ವಾರ್ಷಿಕೋತ್ಸವದ ಅಂಗವಾಗಿ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಯಿತು. ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಕ್ಕಳಿಗೆ ಜಾಗೃತಿಯ ಕುರಿತು ವಿವಿಧ ಉಪನ್ಯಾಸಗಳು ನಡೆದವು.

ಕಾರ್ಯಕ್ರಮದಲ್ಲಿ ಮಕ್ಕಳು ಸ್ವಯಂ ರಕ್ಷಣೆ (ಸೆಲ್ಫ್ ಡಿಫೆನ್ಸ್) ಕಲಿಕೆಗಾಗಿ ಕಾರ್ಯಾಗಾರದಲ್ಲಿ ಭಾಗವಹಿಸಿದರು. ಈ ಮೂಲಕ ಸ್ವತಂತ್ರ ಜೀವನದ ಅವಶ್ಯಕತೆ ಹಾಗೂ ಮಹಿಳಾ ಸಬಲೀಕರಣದ ಕುರಿತು ಅರಿವು ಮೂಡಿಸಲಾಯಿತು.

ಪೊಲೀಸ್ ಇಲಾಖೆಯ ಉತ್ಸಾಹ, ಪ್ರೇರಣೆ, ಹಾಗೂ ಮಕ್ಕಳಲ್ಲಿ ನಂಬಿಕೆ ಬೆಳೆಯುವ ಕಾರ್ಯವು ಈ ಕಾರ್ಯಕ್ರಮದ ಮುಖ್ಯ ಆಕರ್ಷಣೆ ಆಗಿತ್ತು. ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಕುರಿತು ಮಕ್ಕಳಲ್ಲಿ ಜಾಗೃತಿಯನ್ನು ಹೆಚ್ಚಿಸಲು ಈ ರೀತಿಯ ಕಾರ್ಯಕ್ರಮಗಳು ಮಹತ್ವಪೂರ್ಣ ಎಂದು ಆಯೋಜಕರು ಅಭಿಪ್ರಾಯಪಟ್ಟರು.

WhatsApp Image 2025-06-21 at 19.57.59
Trending Now