
ಶಿವಮೊಗ್ಗ ನಗರದ ಪ್ರಸಿದ್ಧ ಖಾಸಗಿ ಆಸ್ಪತ್ರೆಗೆ ಸೇರಿರುವ ನಂಜಪ್ಪ ಲೈಫ್ ಕಾರ್ ಆಸ್ಪತ್ರೆಯಲ್ಲಿ ವಿದ್ಯುತ್ ಸೌಲಭ್ಯ ಸರಿಯಾಗಿ ಇಲ್ಲದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇತ್ತೀಚೆಗೆ ನಡೆದ ವಿದ್ಯುತ್ ವ್ಯತ್ಯಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಲವಾರು ರೋಗಿಗಳು ಬಾಧೆ ಅನುಭವಿಸಿದ್ದಾರೆ. ವಿಶೇಷವಾಗಿ ಆಮ್ಲಜನಕ (ಆಕ್ಸಿಜನ್) ಪೂರೈಕೆ ಯಂತ್ರಗಳಿಗೆ ಅವಲಂಬಿತ ರೋಗಿಗಳ ಪರಿಸ್ಥಿತಿ ತೀವ್ರವಾಗಿದ್ದು, ತುರ್ತು ಪರಿಸ್ಥಿತಿಯನ್ನು ಉಂಟುಮಾಡಿದೆ.
ಅತ್ಯಾಧುನಿಕ ವೈದ್ಯಕೀಯ ತಂತ್ರಜ್ಞಾನವನ್ನು ಹೊಂದಿರುವೆಂದು ಹೆಮ್ಮೆಪಡುವ ಈ ಖಾಸಗಿ ಆಸ್ಪತ್ರೆಗಳಲ್ಲಿ ಇಂತಹ ಮೂಲಭೂತ ಸೌಲಭ್ಯಗಳ ಕೊರತೆ ಕಂಡುಬಂದಿರುವುದು ಜನರಲ್ಲಿಯು ಆತಂಕ ಮತ್ತು ಆಕ್ರೋಶ ಮೂಡಿಸಿದೆ. ಸಾವಿರಾರು ರೂಪಾಯಿ ವೆಚ್ಚದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಹಾಗೂ ಅವರ ಕುಟುಂಬಸ್ಥರಿಗೆ ಇದೊಂದು ದೊಡ್ಡ ನಿರಾಸೆಯ ಸಂಗತಿಯಾಗಿದ್ದು, ಜೀವದ ಮೇಲೆ ಮಾರಕ ಪರಿಣಾಮ ಬೀರುವಂತಹ ಪರಿಸ್ಥಿತಿಗೆ ಕಾರಣವಾಗಿದೆ.
ಆಸ್ಪತ್ರೆಯ ಆಡಳಿತ ಮಂಡಳಿಯಿಂದ ಈ ಕುರಿತು ಸ್ಪಷ್ಟನೆ ನೀಡಲಾಗಿಲ್ಲ. ಆದರೆ ಸಾರ್ವಜನಿಕರು ಹಾಗೂ ರೋಗಿಗಳ ಕುಟುಂಬಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಗೆ ನಿರಂತರ ವಿದ್ಯುತ್ ಪೂರೈಕೆಗಾಗಿ ಜನರೇಟರ್ ಅಥವಾ ಬ್ಯಾಕಪ್ ವ್ಯವಸ್ಥೆಗಳ ಕೊರತೆಯಿರುವುದೆಂಬ ಪ್ರಶ್ನೆಗಳು ಎದುರಾಗಿವೆ.
ಸರ್ಕಾರ ಹಾಗೂ ಆರೋಗ್ಯ ಇಲಾಖೆಯು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ತೆಗೆದುಕೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳು ಹಣವನ್ನು ಮಾತ್ರ ನೋಡಿ, ರೋಗಿಗಳ ಸುಖ-ಸೌಕರ್ಯಗಳನ್ನು ನಿರ್ಲಕ್ಷಿಸಬಾರದು ಎಂಬ ಮಾತು ಇಂಥ ಘಟನೆಗಳಿಂದ ಮತ್ತೊಮ್ಮೆ ಸಾಬೀತಾಗುತ್ತಿದೆ.