
ತಮಿಳುನಾಡಿನ ನಮಕ್ಕಲ್ ಜಿಲ್ಲೆಯಲ್ಲಿ ಮಾನವೀಯತೆಯನ್ನು ನಡುಗಿಸುವ ಹೃದಯವಿದ್ರಾವಕ ಘಟನೆ ಏಪ್ರಿಲ್ 6 ರಂದು ನಡೆದಿದೆ. ತನ್ನ ಪ್ರೇಯಸಿ ಲೈಂಗಿಕ ಸಂಬಂಧಕ್ಕೆ ಒಪ್ಪಿಕೊಳ್ಳದ ಆಕ್ರೋಶದಿಂದ ಒಡಿಶಾ ಮೂಲದ ವಲಸೆ ಕಾರ್ಮಿಕನೊಬ್ಬ ತನ್ನ ಪ್ರೇಮಿಕೆಯ ಒಂದೂವರೆ ವರ್ಷದ ಮಗುವಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ.
ಪತಿಯೊಂದಿಗೆ ವಿಚ್ಛೇದನಗೊಂಡಿದ್ದ ಮಹಿಳೆ ತನ್ನ ಮಕ್ಕಳೊಂದಿಗೆ ಆರೋಪಿಯೊಂದಿಗೆ ವಾಸವಿದ್ದರು. ಸಂಬಂಧಕ್ಕೆ ಮಹಿಳೆ ನಿರಾಕರಿಸಿದ್ದರಿಂದ ಆಕ್ರೋಶಗೊಂಡ ಆರೋಪಿ, ಮಗುವನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ದೌರ್ಜನ್ಯ ಎಸಗಿದ್ದಾನೆ ಎಂಬುದಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.
ಘಟನೆ ನಂತರ ಮಗುವಿನ ಗೋಪ್ಯಾಂಗದಲ್ಲಿ ರಕ್ತಸ್ರಾವವಾಗುತ್ತಿರುವುದನ್ನು ಗಮನಿಸಿದ ತಾಯಿ ತಕ್ಷಣ ಮಗುವನ್ನು ಆಸ್ಪತ್ರೆಗೆ ದಾಖಲಿಸುತ್ತಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಶಿಶುವಿಗೆ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ವೈದ್ಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯದ ಆದೇಶದಂತೆ ಆರೋಪಿಯನ್ನು ಸೇಲಂ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದ್ದು, ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಈ ಹೃದಯವಿದ್ರಾವಕ ಘಟನೆಯು ಜಿಲ್ಲೆಯಾದ್ಯಂತ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಆಕ್ರೋಶವನ್ನು ಹುಟ್ಟುಹಾಕಿದ್ದು, ಬಾಲಕರ ಹಾಗೂ ಮಹಿಳೆಯರ ಸುರಕ್ಷತೆಗಾಗಿ ಸರ್ಕಾರ ತೀವ್ರ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.