
ಚಿಕ್ಕಮಗಳೂರು: NR Pura
ಅರಣ್ಯ ಕಾಯ್ದೆ ಉಲ್ಲಂಘನೆಯ ಆರೋಪದಲ್ಲಿ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವ ಘಟನೆ ನರಸಿಂಹರಾಜಪುರ ತಾಲ್ಲೂಕಿನಲ್ಲಿ ನಡೆದಿದೆ.
ತಾಲ್ಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ದೊಡ್ಡಿನತಲೆ ನಿವಾಸಿಗಳಾದ ಎಸ್. ಎನ್. ಲೋಕೇಶ್ ಹಾಗೂ ಚಿನ್ನಯ್ಯ ಎಂಬ ಇಬ್ಬರು ವ್ಯಕ್ತಿಗಳು ಆರಂಬಳ್ಳಿ ಮೀಸಲು ಅರಣ್ಯದ ಸರ್ವೆ ನಂ. 48ರಲ್ಲಿ ಚುಕ್ಕಿ ಜಿಂಕೆಯನ್ನು ಅಕ್ರಮವಾಗಿ ಬೇಟೆ ಮಾಡಿದ್ದು, ಅದನ್ನೇ ಬೇಯಿಸುತ್ತಿರುವ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸಿಕ್ಕಿದ ಖಚಿತ ಮಾಹಿತಿಯಂತೆ ದಾಳಿ ನಡೆಸಿ ಬಂಧಿಸಲಾಗಿದೆ.
ಈ ಕಾರ್ಯಾಚರಣೆಯನ್ನು ನರಸಿಂಹರಾಜಪುರ ವಲಯ ಅರಣ್ಯಾಧಿಕಾರಿ ಪ್ರವೀಣ್ ಕುಮಾರ್ ಅವರ ನೇತೃತ್ವದ ತಂಡ ಯಶಸ್ವಿಯಾಗಿ ನಡೆಸಿದೆ. ಆರೋಪಿಗಳನ್ನು ಬಂಧಿಸಿದ ಅಧಿಕಾರಿಗಳು, ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಅರಣ್ಯ ಜೀವಿಗಳ ರಕ್ಷಣೆ ಮತ್ತು ನೈಸರ್ಗಿಕ ಪರಿಸರದ ಸಮತೋಲನ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಈ ಕ್ರಮ ಪ್ರಶಂಸನೀಯವಾಗಿದೆ. ಅಕ್ರಮ ಬೇಟೆಗಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಲ್ಲಿ ಅಧಿಕಾರಿಗಳು ಇನ್ನಷ್ಟು ಗಂಭೀರತೆ ವಹಿಸಬೇಕು ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.