September 9, 2025
sathvikanudi - ch tech giant

ಬೈಕ್–ಕ್ಯಾಂಟರ್ ಭೀಕರ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ!?

Spread the love



ಚಿಕ್ಕಬಳ್ಳಾಪುರ ಜಿಲ್ಲೆ, ಜೂನ್ 18 –
ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಪೋಶೆಟ್ಟಿಹಳ್ಳಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಎಂ.ಗುಂಡ್ಲಹಳ್ಳಿ ಗ್ರಾಮದ ಕೃಷ್ಣಪ್ಪ (30) ಮತ್ತು ಹಳೆಬುದ್ಧಿವಂತನಹಳ್ಳಿಯ ಪ್ರಕಾಶ್ (24) ಮೃತರು. ಇಬ್ಬರೂ ಟೈಟಾನಿಕ್ ಕಂಪನಿಯಲ್ಲಿ ಉದ್ಯೋಗಿಗಳಾಗಿದ್ದು, ದೈನಂದಿನಂತೆ ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಸಂಬಂಧಪಟ್ಟ ಮಾಹಿತಿಯಂತೆ, ಅತಿವೇಗದಲ್ಲಿ ಬಂದಿದ್ದ ಕ್ಯಾಂಟರ್ ವಾಹನವು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ತೀವ್ರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದ ತೀವ್ರತೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.

ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆದಿದೆ. ಮೃತರ ಕುಟುಂಬಗಳಲ್ಲಿ ಶೋಕದ ಮಡು ಹರಡಿದ್ದು, ಗ್ರಾಮದಲ್ಲಿ ದುಃಖದ ಛಾಯೆ ಆವರಿಸಿಕೊಂಡಿದೆ.


WhatsApp Image 2025-06-21 at 19.57.59
Trending Now