September 9, 2025
sathvikanudi - ch tech giant

ಆನಂದಪುರದಲ್ಲಿ ವಿಕಾಸಿತ ಭಾರತ ಸಂಕಲ್ಪ ಯಾತ್ರೆ ಆರಂಭ
ಶಿವಮೊಗ್ಗ ಜಿಲ್ಲಾ ಮಾಜಿ ಸಚಿವ ಹಾಲಪ್ಪ ಅವರಿಂದ ಪ್ರಾರಂಭ!?

Spread the love





ಆನಂದಪುರ, ಜುಲೈ 2:
ಮಂಗಳವಾರ ಸಂಜೆ ಆನಂದಪುರದ ಶ್ರೀ ರಂಗನಾಥಸ್ವಾಮಿ ದೇವಾಲಯದಲ್ಲಿ “ವಿಕಾಸಿತ ಭಾರತ ಸಂಕಲ್ಪ ಯಾತ್ರೆ” ಕಾರ್ಯಕ್ರಮವು ವಿಜೃಂಭಣೆಯಿಂದ ಆರಂಭವಾಯಿತು. ಈ ಯಾತ್ರೆಯನ್ನು ಶಿವಮೊಗ್ಗ ಜಿಲ್ಲಾ ಮಾಜಿ ಸದಸ್ಯರಾದ ರತ್ನಾಕರ್ ಹುನ್ಗೋಡ್ ಅವರ ನೇತೃತ್ವದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರಾರಂಭಿಸಲಾಯಿತು.



ಕಾರ್ಯಕ್ರಮವನ್ನು ಮಾಜಿ ಸಚಿವರಾದ  ಹಾಲಪ್ಪ ಉದ್ಘಾಟಿಸಿ, ತಮ್ಮ ಭಾಷಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 11 ವರ್ಷಗಳ ಶಾಸನಾವಧಿಯಲ್ಲಿ ದೇಶದಾದ್ಯಂತ ಹಾಗೂ ಕರ್ನಾಟಕದಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳ ಕುರಿತು ವಿವರಿಸಿದರು. ಅವರು ಮುಂದಿನ ದಿನಗಳಲ್ಲಿ ಕೈಗೊಳ್ಳಲಿರುವ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸಿದರು.

ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಅವರು ಮಾತನಾಡಿ, “ವಿಕಾಸಿತ ಭಾರತ”ದ ಕನಸನ್ನು ನಿಜವಾಗಿಸಲು ಪ್ರತಿಯೊಬ್ಬರೂ ಭಾಗವಹಿಸಬೇಕಿದೆ ಎಂದು ಕರೆ ನೀಡಿದರು.

ಮಾಜಿ ಸಚಿವ ಹಾಲಪ್ಪ ಅವರು, “ಬಡವರಿಗೆ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ ಯೋಜನೆಯಡಿ 5 ಲಕ್ಷ ರೂ. ವರೆಗೆ ಉಚಿತ ಚಿಕಿತ್ಸೆ ದೊರೆಯುವುದು. ಈ ಸೌಲಭ್ಯವನ್ನು ಜಿಲ್ಲಾಸ್ಪತ್ರೆಗಳ ಅಧಿಕಾರಿಗಳ ಮೂಲಕ ಆರೋಗ್ಯ ಕಾರ್ಡ್ ಮೂಲಕ ಪಡೆದುಕೊಳ್ಳಬಹುದಾಗಿದೆ” ಎಂದು ಹೇಳಿದರು. ಇದನ್ನು ಸದುಪಯೋಗಪಡಿಸಿಕೊಳ್ಳಲು ಜನರು ಯಾವಾಗ ಬೇಕಾದರೂ ನಮ್ಮ ಸಂಪರ್ಕಿಸಬಹುದು ಎಂದು ದೇವಾಲಯದ ಸಭೆಮಂದಿರದಲ್ಲೇ ಪ್ರಮಾಣವಾಗಿ ಹೇಳಿದರು.

ಈ ಸಂದರ್ಭದಲ್ಲಿ ಶಾಂತಪ್ಪ ಗೌಡ್ರು ಅಧ್ಯಕ್ಷತೆ ವಹಿಸಿದ್ದರು. ಆನಂದಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ. ಗುರುರಾಜ್, ಉಪಾಧ್ಯಕ್ಷೆ ರೂಪಾ ನಾಗರಾಜ್, ಹಲವು ಬಿಜೆಪಿ ಜಿಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ : ರಮೇಶ್  ಸಾಗರ

WhatsApp Image 2025-06-21 at 19.57.59
Trending Now