
ಶಿವಮೊಗ್ಗ:
ದೇಶದ ಎರಡನೇ ಅತಿ ಉದ್ದದ ತೂಗು ಸೇತುವೆಗಳಲ್ಲಿ ಒಂದಾದ ಸಿಗಂಧೂರು ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಜುಲೈ 14ರಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿಯವರಿಂದ ಈ ಸೇತುವೆಯ ಲೋಕಾರ್ಪಣೆ ನೆರವೇರಿಸಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹೊಸ ಸೇತುವೆಯ ಮೂಲಕ ಶ್ರೀ ಕ್ಷೇತ್ರ ಸಿಗಂಧೂರಿಗೆ ಸುಲಭ ಸಂಪರ್ಕ ದೊರೆಯಲಿದೆ ಎಂದು ತಿಳಿಸಿದ್ದಾರೆ. ಇದುವರೆಗೆ ಭಕ್ತರು ಶರಾವತಿ ನದಿಯನ್ನು ಲಾಂಚ್ ಮೂಲಕ ದಾಟಿ ದೇವಸ್ಥಾನಕ್ಕೆ ಹೋಗಬೇಕಾಗುತ್ತಿತ್ತು. ಆದರೆ ಈ ಸೇತುವೆ ಉದ್ಘಾಟನೆಯಿಂದ ಭಕ್ತರಿಗೆ ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ.
ಈ ಐತಿಹಾಸಿಕ ಸೇತುವೆಗೆ “ಸಿಗಂಧೂರು ಚೌಡೇಶ್ವರಿ ಸೇತುವೆ” ಎಂದು ನಾಮಕರಣ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿರುವುದಾಗಿ ಸಂಸದರು ತಿಳಿಸಿದ್ದಾರೆ. ಇದಕ್ಕೆ ಅಗತ್ಯವಿರುವ ಅನುಮತಿಗಳನ್ನು ತ್ವರಿತವಾಗಿ ನೀಡುವಂತೆ ಅವರು ಸರ್ಕಾರವನ್ನು ಮನವಿ ಮಾಡಿದ್ದಾರೆ.
ಈ ವೇಳೆ ಶಾಸಕ ಶ್ರೀ ಆರಗ ಜ್ಞಾನೇಂದ್ರ, ಶ್ರೀ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಧನಂಜಯ ಸರ್ಜೆ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಲಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಜಗದೀಶ್, ರಾಜ್ಯ ಪ್ರಕೋಷ್ಟ ಸಂಯೋಜಕ ಎಸ್. ದತ್ತಾತ್ರೇಯ, ಮಾಜಿ ಶಾಸಕ ಕೆ.ಜಿ. ಕುಮಾರಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹರಿಕೃಷ್ಣ ಮತ್ತು ಮಾಲತೇಶ್ ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.✍🏻✍🏻✍🏻
ವರದಿ : ರಮೇಶ್ ಆನಂದಪುರ