October 27, 2025
sathvikanudi - ch tech giant

ವಿದ್ಯುತ್ ದುರಸ್ತಿ ವೇಳೆ ದುರಂತ: ಲೈನ್ ಮ್ಯಾನ್ ವರುಣ್ ದುರ್ಮರಣ, ಸಂಸದ ಶ್ರೇಯಸ್ ಪಟೇಲ್ ಸಾಂತ್ವನ!?

Spread the love



ಹಾಸನ: ತಾಲ್ಲೂಕಿನ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಶನಿವಾರದಂದು ವಿದ್ಯುತ್ ಲೈನ್ ದುರಸ್ತಿ ಮಾಡುತ್ತಿದ್ದ ವೇಳೆ ಸಂಭವಿಸಿದ ದುರಂತದಲ್ಲಿ ವಿದ್ಯುತ್ ಸ್ಪರ್ಶದಿಂದ ಲೈನ್ ಮ್ಯಾನ್ ವರುಣ್ (32) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಮ್ಮಗೋಡನಹಳ್ಳಿ ಗ್ರಾಮದ ನಿವಾಸಿಯಾಗಿದ್ದ ವರುಣ್, ಮೊಸಳೆಹೊಸಹಳ್ಳಿ ರೈಲ್ವೆ ನಿಲ್ದಾಣದ ಬಳಿ ವಿದ್ಯುತ್ ಕಂಬವೇರಿ ಲೈನ್ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಸಂಸದ ಶ್ರೇಯಸ್ ಪಟೇಲ್ ಭೇಟಿ, ಸಾಂತ್ವನ:-

ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಮೃತರ ಅಂತಿಮ ದರ್ಶನ ಪಡೆದ ಸಂಸದ ಶ್ರೇಯಸ್ ಪಟೇಲ್, , ವರುಣ್ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೃತರ ಕುಟುಂಬಸ್ಥರ ದುಃಖದಲ್ಲಿ ಪಾಲ್ಗೊಂಡ ಸಂಸದರು, ಅವರಿಗೆ ಧೈರ್ಯ ತುಂಬಿದರು.

“ವರುಣ್ ಅವರ ಅಗಲಿಕೆಯಿಂದ ತೀವ್ರ ದುಃಖವಾಗಿದೆ. ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ವರುಣ್ ಅವರ ಕುಟುಂಬಸ್ಥರ ಜೊತೆಗೆ ನಾವು ಸದಾ ಇರುತ್ತೇವೆ. ಸರ್ಕಾರದಿಂದ ಸೂಕ್ತ ಪರಿಹಾರ ಕಲ್ಪಿಸುವ ಕೆಲಸ ಮಾಡಲಾಗುವುದು. ಈ ಸಂಬಂಧ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ,” ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದ್ದಾರೆ.

ಈ ದುರ್ಘಟನೆಗೆ ನಿಖರ ಕಾರಣ ಏನೆಂಬುದು ತನಿಖೆಯಿಂದ ತಿಳಿಯಬೇಕಿದೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ

ವರದಿ: ಯೊಗೇಶ್ ಹಾಸನ

WhatsApp Image 2025-06-21 at 19.57.59
Trending Now