
ಶಿವಮೊಗ್ಗ ಜಿಲ್ಲೆ :
ಸಾಗರ ತಾಲೂಕು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ತಾಲೂಕು ಅಧ್ಯಕ್ಷ ಶ್ರೀ ಉಮೇಶ್ ಮಸರೂರು ಅವರು ರಿಪ್ಪನ್ ಪೇಟೆಯ ಶಿವ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶ್ರೀ ಬಿ.ಎಸ್. ಯಡಿಯೂರಪ್ಪ ಕರ್ನಾಟಕ ರಾಜ್ಯಕ್ಕೆ ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಇವರ ಅಧಿಕಾರ ಅವಧಿಯಲ್ಲಿ ಜಿಲ್ಲೆಯನ್ನು ವಿಶ್ವ ಭೂಪಟದಲ್ಲಿ ಗುರುತಿಸುವಂತಹ ಅಭಿವೃದ್ಧಿ ಕಾಮಗಾರಿಗಳು ನಡೆದಿದೆ. Bsy ಅವರು ಒಂದು ವರ್ಗಕ್ಕೆ ಸೀಮಿತ ರಾಜಕಾರಣ ಮಾಡದೆ, ತಮ್ಮ ಅಧಿಕಾರ ಅವಧಿಯಲ್ಲಿ ಎಲ್ಲಾ ವರ್ಗಗಳನ್ನು ಸಮಾನವಾಗಿ ಕಂಡಿದ್ದಾರೆ. ಈ ಕಾರಣಕ್ಕೆ ಅವರ ಪರಿಶ್ರಮದಿಂದ ಅಂಬಾರಗೋಡ್ಲು – ಕಳಸವಳ್ಳಿ ಸಿಗಂದೂರು ಶರಾವತಿ ನದಿಯ ಮೇಲ್ಸೆತುವೆ ತ್ವರಿತ ಗತಿಯಲ್ಲಿ ನಿರ್ಮಾಣವಾಗಿದ್ದು, ಅದಕ್ಕೆ ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡಬೇಕೆಂದು ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರ ಈ ಕೂಡಲೇ ಈ ಸೇತುವೆಗೆ ಬಿಎಸ್ವೈ ಹೆಸರು ಪರಿಗಣಿಸಿ ನಾಮಕರಣ ಮಾಡಲು ಅಗತ್ಯ ಕ್ರಮಕೈಗೊಳ್ಳುವಂತೆ ಅವರು ಉಪತಾಹಸಿಲ್ದಾರ್ ಮೂಲಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.
