December 9, 2025
Breaking News

ಉಪನ್ಯಾಸಕನಿಂದ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಖಂಡಿಸಿ ಎಐಡಿಎಸ್‍ಒ ವತಿಯಿಂದ ಪ್ರತಿಭಟನೆ – ಆರೋಪಿಗಳಿಗೆ ಕಠಿಣ ಶಿಕ್ಷೆ ಆಗ್ರಹ!?

Spread the love


ಹಾಸನ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಒಡ್ಡಿರುವ ಇಬ್ಬರು ಉಪನ್ಯಾಸಕರ ಹೇಯ ಕೃತ್ಯ ಖಂಡಿಸಿ ನಗರದ ಹೇಮಾವತಿ ಪ್ರತಿಮೆ ಮುಂಭಾಗ ಎಐಡಿಎಸ್‍ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು.


ಈ ವೇಳೆ ಮಾತನಾಡಿ ಎಐಡಿಎಸ್‍ಒ ಜಿಲ್ಲಾ ಸಂಚಾಲಕಿ ಚೈತ್ರ, ಬೆಂಗಳೂರಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಒಡ್ಡಿರುವ ಇಬ್ಬರು ಶಿಕ್ಷಕರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಅಗ್ರಹಿಸಿದರು.


ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ದಿನೇ ದಿನೆ ಹೆಚ್ಚುತ್ತಿದೆ, ಒರಿಸ್ಸಾದಲ್ಲಿ ಕಾಲೇಜಿನ ಉಪನ್ಯಾಸಕರು ನೀಡಿರುವ ಲೈಂಗಿಕ ಕಿರುಕುಳದಿಂದ ಬೇಸತ್ತು, ಒಬ್ಬ ವಿದ್ಯಾರ್ಥಿನಿ ಬೆಂಕಿ ಹಾಕಿಕೊಂಡು, ಆತ್ಮಹತ್ಯೆ ಮಾಡಿಕೊಂಡಿದ್ದಾಳೆ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡದಿದ್ದರೆ, ಇಂತಹ ಪ್ರಕರಣಗಳು ಹೆಚ್ಚಾಗುತ್ತವೆ

ಈ ಘೋರ ಘಟನೆಯು ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಪಕವಾಗಿರುವ ಲೈಂಗಿಕ ದೌರ್ಜನ್ಯ ಸಮಸ್ಯೆಗಳಿಗೆ ಹಿಡಿದ ಕನ್ನಡಿಯಾಗಿದೆ. ಯುವ ಮನಸ್ಸುಗಳನ್ನು ಸ್ವಚ್ಛಗೊಳಿಸಿ ಅವರ ಭವಿಷ್ಯವನ್ನು ಉಜ್ವಲಗೊಳಿಸಬೇಕಾದ ಪ್ರಾಧ್ಯಾಪಕರು ಇಂತಹ ಹೇಯ ಕೃತ್ಯಗಳಲ್ಲಿ ಭಾಗಿಯಾಗಿರುವುದು ದುರಂತವೇ ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಘಟನೆ ಬಗ್ಗೆ ತ್ವರಿತ ಹಾಗೂ ನಿಷ್ಪಕ್ಷಪಾತ ಮತ್ತು ಸಂಪೂರ್ಣ ತನಿಖೆ ನಡೆಸಿ, ಎಲ್ಲಾ ಅಪರಾಧಿಗಳನ್ನು ಕೂಡಲೇ ಕಾನೂನಿನ ಮುಂದೆ ತರಬೇಕು.

ಆರೋಪಿ ಉಪನ್ಯಾಸಕರನ್ನು ತಕ್ಷಣವೇ ಅಮಾನತುಗೊಳಿಸಬೇಕು. ಇದರಲ್ಲಿ ಪ್ರಬಲ ಕುಂದುಕೊರತೆ ನಿವಾರಣಾ ಕಾರ್ಯ ಸಮಿತಿ ಸ್ಥಾಪಿಸುವುದು ಸೇರಿದಂತೆ, ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯದಿಂದ ವಿದ್ಯಾರ್ಥಿಗಳನ್ನು ರಕ್ಷಿಸಲು ಶಿಕ್ಷಣ ಸಂಸ್ಥೆಗಳಲ್ಲಿ ಕಠಿಣ ಕ್ರಮಗಳನ್ನು ಜಾರಿಗೊಳಿಸಬೇಕು. ಸಂತ್ರಸ್ತೆಗೆ ಸಂಪೂರ್ಣ ಬೆಂಬಲ ನೀಡಬೇಕು ಎಂದು ಆಗ್ರಹಿಸಿದರು.


ಸರ್ಕಾರ ಕೂಡ ವಿದ್ಯಾರ್ಥಿ ಯುವಜನರಲ್ಲಿ ಉನ್ನತ ಆದರ್ಶ ಮೌಲ್ಯಗಳನ್ನು ಬಿತ್ತುವ ನಿಟ್ಟಿನಲ್ಲಿ ಕಾಲೇಜುಗಳಲ್ಲಿ ಕಾರ್ಯಕ್ರಮ ಸಂಘಟಿಸ ಬೇಕೆಂದು ಹೇಳಿದರು.
ಪ್ರತಿಭಟನೆಯಲ್ಲಿ ಕಾರ್ಯಕರ್ತ ತಿಲಕ್ ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವರದಿ : ✍🏻 ಯೊಗೇಶ್ ಹಾಸನ

WhatsApp Image 2025-06-21 at 19.57.59