
ನಡೆದ ಕಾರ್ಮಿಕ ಸಚಿವರಾದ ಸನ್ಮಾನ್ಯ ಶ್ರೀ ಸಂತೋಷ್ ಲಾಡ್ ಸರ್ ಇವರ ಮುಂದಾಳತ್ವದಲ್ಲಿ ಕೊಪ್ಪಳ ಜಿಲ್ಲೆಯ ವಿವಿಧ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಸ್ಮಾರ್ಟ್ ಕಾರ್ಡ್ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು ಇದೇ ವೇಳೆ ವಿವಿಧ ಯೋಜನೆಗಳಡಿ ಪರಿಹಾರಧನದ ಚೆಕ್‌ಗಳನ್ನು ವಿತರಿಸಲಾಯಿತು.

ಈ ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್ ಅರಸಿದ್ದಿ, ಜಿಲ್ಲಾಧಿಕಾರಿ ಸುರೇಶ್ ಪಿ ಇಟ್ನಾಳ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀನಿವಾಸ ಗುಪ್ತ, ಕಾರ್ಮಿಕ ಇಲಾಖೆಯ ಅಧಿಕಾರಿಗಳಾದ ಶ್ರೀಮತಿ ಸುಧಾ ಗರಗ ಕೊಪ್ಪಳ ಜಿಲ್ಲೆ ವ್ಯಾಪ್ತಿಯಲ್ಲಿರುವ ಎಲ್ಲಾ ತಾಲೂಕು ಅಧಿಕಾರಿಗಳು ಹಾಜರಾಗಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.

ವರದಿ:✍🏻 ಶಶಿಧರ್ ಹೊಸಮನಿ ಕೊಪ್ಪಳ ಜಿಲ್ಲೆ ಯಲಬುರ್ಗಾ