September 10, 2025
sathvikanudi - ch tech giant

ಹಾಸನಕ್ಕೆ ಮಂತ್ರಿ ಭಾಗ್ಯ; ಈ ನಾಯಕನಿಗೆ ಸಚಿವ ಸ್ಥಾನ ಫಿಕ್ಸ್‌ : ಸಿದ್ದರಾಮಯ್ಯ!?

Spread the love



ಹಾಸನ :ಶಿವಲಿಂಗೇಗೌಡರಿಗೆ ರಾಜಕೀಯ ಭವಿಷ್ಯವಿದೆ. ಮಂತ್ರಿಯಾಗುವ ಎಲ್ಲಾ ಅರ್ಹತೆ ಹೊಂದಿದ್ದಾರೆ. ಜೊತೆಗೆ ಕ್ಷೇತ್ರದ ಜನರ ಆಶೀರ್ವಾದವೂ ಗಟ್ಟಿಯಾಗಿದೆ. ಈ ಕಾರಣಕ್ಕೇ ನಾಲ್ಕು ಬಾರಿ ಗೆದ್ದಿರುವ ಶಿವಲಿಂಗೇಗೌಡರು ಮುಂದಿನ ಬಾರಿಯೂ ಗೆದ್ದು ಬರುತ್ತಾರೆ. ಆದರೆ ಕೆಲವೊಂದು ರಾಜಕೀಯ ಸಂಗತಿಗಳನ್ನು ಬಹಿರಂಗವಾಗಿ ಚರ್ಚಿಸಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಶಿವಲಿಂಗೇಗೌಡರಿಗೆ ಮುಂದಿನ ಬಾರಿ ಸಚಿವ ಸ್ಥಾನ ಸಿಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ.

ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾವು ಜಾರಿಗೆ ತಂದ ಐದು ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ. ಬಿಜೆಪಿಯವರಿಗೆ ಆರ್ಥಿಕತೆ ಅರ್ಥವಾಗುವುದಿಲ್ಲ. ಕ್ಷೇತ್ರದ ಜನಪರ ಅಭಿವೃದ್ಧಿ ಕೆಲಸ ಮಾಡುವುದರಲ್ಲೇ ಇರಲಿ, ವಿಧಾನಸಭೆಯಲ್ಲಿ ಪಕ್ಷ ಮತ್ತು ಸರ್ಕಾರದ ಜನಪರ ಕಾರ್ಯಗಳನ್ನು ಸಮರ್ಥವಾಗಿ ಮಂಡಿಸುವುದರಲ್ಲೂ ಮುಂದಿದ್ದಾರೆ. ನಾಲ್ಕು ಬಾರಿ ಶಾಸಕರಾಗಿರುವ ಶಿವಲಿಂಗೇಗೌಡರು ಮುಂದಿನ ಚುನಾವಣೆಯಲ್ಲೂ ಗೆಲ್ಲುವುದು ಶತಸಿದ್ಧ ಎಂದು ಭರವಸೆ ವ್ಯಕ್ತಪಡಿಸಿದರು.

ವರದಿ : ಯೊಗೇಶ್ ಹಾಸನ

WhatsApp Image 2025-06-21 at 19.57.59
Trending Now