
ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತೊಮ್ಮೆ ಮುಂದೂಡಿದೆ. ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಕೆಲ ಸ್ಪಷ್ಟೀಕರಣಗಳ ಅವಶ್ಯಕತೆಯ ಹಿನ್ನೆಲೆಯಲ್ಲಿ ಆಗಸ್ಟ್ 1ಕ್ಕೆ ತೀರ್ಪು ಜಾರಿ ಮಾಡಲಾಗುವುದು ಎಂದು ಇಂದು ಘೋಷಿಸಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧದ ಈ ಗಂಭೀರ ಆರೋಪದ ವಿಚಾರಣೆ ಜುಲೈ 29ರಂದು ಪೂರ್ಣಗೊಂಡಿದ್ದರೂ, ನ್ಯಾಯಾಲಯ ತೀರ್ಪು ಪ್ರಕಟಿಸಲು ಮುಂದಾಗದಿದ್ದು, ಕೆಲ ಅಸ್ಪಷ್ಟ ವಿಷಯಗಳ ಬಗ್ಗೆ ಹೆಚ್ಚಿನ ಸ್ಪಷ್ಟತೆ ಬೇಕೆಂಬುದೇ ಕಾರಣವಾಗಿದೆ ಎಂದು ನ್ಯಾಯಾಧೀಶರು ಹೇಳಿದರು.
🔍 ಪ್ರಕರಣದ ಹಿನ್ನೆಲೆ:
ಮೈಸೂರಿನ ಕೆಆರ್ ನಗರದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದೊಂದಿಗೆ, ಅವನನ್ನು ಅಪಹರಿಸಿ ಹುಣಸೂರು ಬಳಿಯ ತೋಟದ ಮನೆಯಲ್ಲಿ ಬಲವಂತವಾಗಿ ಇಡಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ, ಅವರ ಪತ್ನಿ ಭವಾನಿ ರೇವಣ್ಣ ಸೇರಿ ಒಟ್ಟು 9 ಮಂದಿಯನ್ನು ಆರೋಪಿಗಳೆಂದು ಗುರುತಿಸಲಾಗಿದೆ.
ಈ ನಡುವೆ, ಎಚ್.ಡಿ. ರೇವಣ್ಣ ಮತ್ತು ಭವಾನಿ ರೇವಣ್ಣ ಅವರಿಗೆ ಈಗಾಗಲೇ ಜಾಮೀನು ಮಂಜೂರಾಗಿದೆ. ಆದರೆ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ತೀರ್ಪು ನಿರೀಕ್ಷೆಯಲ್ಲಿದೆ.
ವರದಿ : ಯೊಗೇಶ್ ಹಾಸನ