
🗞
📍 ಹದಡಿ, ದಾವಣಗೆರೆ
ಚಿನ್ನದ ನಾಣ್ಯ ಕೊಡುತ್ತೇನೆಂದು ನಂಬಿಸಿ ₹5 ಲಕ್ಷ ವಂಚಿಸಿದ ಪ್ರಕರಣದಲ್ಲಿ ಒಬ್ಬನನ್ನು ಹದಡಿ ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಮೂಲದ ರಂಗನಾಥ್ ಎಂಬುವರಿಗೆ ಕಳೆದ ವಾರ ಚಿನ್ನದ ನಾಣ್ಯ ಕೊಡುವುದಾಗಿ ಹೇಳಿ ಕರೆಸಿ, ಆರೋಪಿಯು ₹5 ಲಕ್ಷ ಹಣ ಪಡೆದು ಪರಾರಿಯಾಗಿದ್ದ. ಈ ಕುರಿತು ಹದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪೊಲೀಸರು ತನಿಖೆ ನಡೆಸಿ ಮಂಜುನಾಥ್ (ವಯಸ್ಸು 48) ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತನಿಂದ ₹5 ಲಕ್ಷ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣದಿಂದಾಗಿ ನಕಲಿ ಚಿನ್ನದ ವಂಚನೆ ಪ್ರಕರಣಗಳು ಇನ್ನೂ ಹೇಗೆ ನಡೆಯುತ್ತಿವೆ ಎಂಬುದು ಮತ್ತೆ ಬಹಿರಂಗವಾಗಿದೆ. ಸಾರ್ವಜನಿಕರು ಜಾಗರೂಕರಾಗಿ ಇಂತಹ ವಂಚಕರಿಗೆ ಬಲಿಯಾಗದಂತೆ ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ತಿಳಿಸಿದ್ದಾರೆ. ✍🏻✍🏻✍🏻✍🏻
ಸತೀಶ್ ಮುಂಚೆಮನೆ ಸಾರಥ್ಯದಲ್ಲಿ… ಬಿಗ್ ಲೈವ್ ಸುದ್ದಿ ಕ್ಷಣ ಕ್ಷಣದ ಸುದ್ದಿ ಇನ್ನಷ್ಟು ಸುದ್ದಿ ಓದಲು ಸಾತ್ವಿಕ ನುಡಿ ಮಾಸಪತ್ರಿಕೆಯ web new spage ನೋಡಿ. ಸುದ್ದಿ ಜಾಹಿರಾತುಗಳಿಗಾಗಿ ಕರೆಮಾಡಿ.
9845905838.ವಿಜಯ್ ಮುನಿಯಪ್ಪ
ಕ್ರೈಂ ವರದಿಗಾರರು