March 3, 2026
Spread the love


✍️ ಉಡುಪಿ | 30 ಜನವರಿ 2026.


ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು *ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA)*ಯ ಹೆಸರನ್ನೇ ಹಾಗೂ ಅದರ ಮೂಲ ಸ್ವರೂಪವನ್ನೇ ಬದಲಾಯಿಸಿ VB-G RAM G ಎಂಬ ಹೆಸರಿನಿಂದ ಮರುನಾಮಕರಣ ಮಾಡಿರುವುದು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರಿಗೆ ಮಾಡಿದ ಘೋರ ಅವಮಾನ ಎಂದು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸಿದೆ.
ಕಾರ್ಮಿಕರ ಉದ್ಯೋಗದ ಹಕ್ಕನ್ನು ಕಸಿದುಕೊಂಡಿರುವ ಕೇಂದ್ರ ಸರ್ಕಾರದ ನೀತಿಯನ್ನು ವಿರೋಧಿಸಿ, ಹಿಂದಿನಂತೆ MGNREGA ಯೋಜನೆಯನ್ನು ಮರುಜಾರಿಗೊಳಿಸಬೇಕು ಎಂಬ ಆಗ್ರಹದೊಂದಿಗೆ ರಾಷ್ಟ್ರದಾದ್ಯಂತ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಯುತ್ತಿದೆ.
ಇದಕ್ಕೆ ಅನುಗುಣವಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಆದೇಶದಂತೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಉಡುಪಿ ಬ್ಲಾಕ್ ವ್ಯಾಪ್ತಿಯ ಎಲ್ಲಾ ಬೂತ್ ಮಟ್ಟಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಅದರಂತೆ ದಿನಾಂಕ 30/01/2026 ರಂದು ತೆಂಕನಿಡಿಯೂರು ಪಂಚಾಯತ್ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ,
ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮೊದಲಿನಿಂದಲೂ ಮಹಾತ್ಮ ಗಾಂಧಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವಗಳಿಗೆ ವಿರೋಧವಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.
ರಾಷ್ಟ್ರಪಿತ ಮಹಾತ್ಮ ಗಾಂಧಿಯ ಸ್ಮರಣಾರ್ಥವಾಗಿ ಕಾಂಗ್ರೆಸ್ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿಗೆ ತಂದಿತ್ತು.

ಆದರೆ ಬಿಜೆಪಿ ಸರ್ಕಾರ ಅದನ್ನು ಮರುನಾಮಕರಣ ಮಾಡುವ ದುಸ್ಸಾಹಸಕ್ಕೆ ಕೈಹಾಕಿ VB-G RAM G ಎಂಬ ಹೆಸರನ್ನು ನೀಡಿರುವುದು ಗಾಂಧೀಜಿಯವರ ಆತ್ಮಕ್ಕೆ ಮಾಡಿದ ಅಪಮಾನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


MGNREGA ಯೋಜನೆಯನ್ನು ದುರ್ಬಲಗೊಳಿಸಿ, ಹಂತ ಹಂತವಾಗಿ ಕೈಬಿಡುವ ಉದ್ದೇಶ ಕೇಂದ್ರ ಸರ್ಕಾರಕ್ಕೆ ಇದೆ. ಇದು ಬಡವರು, ಕೂಲಿ ಕಾರ್ಮಿಕರು ಹಾಗೂ ಗ್ರಾಮೀಣ ಜನತೆಗೆ ಮಾಡಿದ ಮಹಾ ಅನ್ಯಾಯ ಎಂದು ಅವರು ತಿಳಿಸಿದರು.


MGNREGA ಹೆಸರನ್ನು ಮರುಸ್ಥಾಪಿಸುವವರೆಗೆ ಮತ್ತು ಯೋಜನೆಯನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸುವವರೆಗೆ ಕಾಂಗ್ರೆಸ್ ಪಕ್ಷದ ಹೋರಾಟ ನಿಲ್ಲುವುದಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.


ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪ್ರಮುಖರು
ಈ ಪ್ರತಿಭಟನೆಯಲ್ಲಿ
ಪಂಚಾಯತ್ ಅಧ್ಯಕ್ಷರಾದ ಶೋಭಾ ಡಿ. ನಾಯ್ಕ್,
ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಮಮತಾ ಶೆಟ್ಟಿ,
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು,
ಕಾರ್ಮಿಕ ಸಂಘದ ಅಧ್ಯಕ್ಷರಾದ ಸೂರಜ್ ಕಲ್ಮಾಡಿ,
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೇರಾ,
ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸತೀಶ್ ನಾಯ್ಕ್,
ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಶರತ್ ಶೆಟ್ಟಿ,
ಪಂಚಾಯತ್ ಸದಸ್ಯರಾದ ಅನುಷಾ ಆಚಾರ್ಯ, ರವಿರಾಜ್ (ಲಕ್ಷ್ಮಿನಗರ), ಮಂಜುನಾಥ್ ಆಚಾರ್ಯ,
ಗ್ರಾಮೀಣ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜೇಶ್ ಕರ್ಕೇರಾ,
ಮಾಜಿ ಪಂಚಾಯತ್ ಸದಸ್ಯ ಕೃಷ್ಣ ಅಮೀನ್,
ಗ್ರಾಮೀಣ ಕಾಂಗ್ರೆಸ್ ಗೌರವ ಅಧ್ಯಕ್ಷ ರೆಜಿನಾಲ್ಡ್ ಪುಟಡೋ,
ಉಪಾಧ್ಯಕ್ಷ ಪ್ರಭಾಕರ್ ಅಂಚನ್,
ಅಬುಬ್ಬಕರ್ ಕೆಳರ್ಕಲ್ ಬೆಟ್ಟು ಸೇರಿದಂತೆ ಪಕ್ಷದ ಅನೇಕ ಕಾರ್ಯಕರ್ತರು ಮತ್ತು ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *